ಕೆಮ್ಮಾರ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

0

ಕೆಮ್ಮಾರ: ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಝೀಝ್ ಬಿ.ಕೆಯವರ ಅಧ್ಯಕ್ಷತೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಆಚರಿಸಲಾಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಾರಿಜಾಕ್ಷಿ, ಹೇಮಂತ್ ಮೈತ್ತಲಿಕೆ, ಮುಖ್ಯ ಶಿಕ್ಷಕಿ ಜಯಶ್ರೀ ಎಂ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಪದ್ಮನಾಭ ಶೆಟ್ಟಿ ಬಡಿಲ, ಅಬ್ಬಾಸ್, ಖಾದರ್ ಅಡೆಕ್ಕಲ್ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.ಮುಖ್ಯ ಶಿಕ್ಷಕಿ ಜಯಶ್ರೀ ಎಂ ಪ್ರಾಸ್ತಾವಿಕವಾಗಿ ಮಾತನಾಡಿ ಮಹರ್ಷಿ ವಾಲ್ಮೀಕಿ ಯುವರ ಜೀವನ ಚರಿತ್ರೆಯನ್ನು ಸವಿವರವಾಗಿ ತಿಳಿಸಿದರು. ಸುಮನ ಸ್ವಾಗತಿಸಿ, ವಂದಿಸಿದರು. ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಅಧ್ಯಾಪಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here