ಪುತ್ತೂರಿನಲ್ಲಿ ಮಾನವ ಕಳ್ಳಸಾಗಣೆ, ಮಕ್ಕಳ ಹಕ್ಕುಗಳ ರಕ್ಷಣೆ ಜಾಗೃತಿ ಬೀದಿ ನಾಟಕ

0

ಪುತ್ತೂರು: ಮಾನವ ಕಳ್ಳಸಾಗಣೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಅ.29ರಂದು ನಡೆಯಿತು.
ಪಡಿ ಮಂಗಳೂರು ಇದರ ಸಹಯೋಗದಲ್ಲಿ ’ಓಯಸಿಸ್ ಬೆಂಗಳೂರು’ ಅವರಿಂದ ಈ ನಾಟಕ ಪ್ರದರ್ಶನಗೊಂಡಿದ್ದು, ಪುತ್ತೂರು ಖಾಸಗಿ ಬಸ್ ನಿಲ್ದಾಣ ಮತ್ತು ಹಾರಾಡಿ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕಿಯರ ವಸತಿನಿಲಯದಲ್ಲಿ ನಾಟಕ ಪ್ರದರ್ಶನಗೊಂಡಿತ್ತು. ಮಾಜಿ ಪುರಸಭೆ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ನಗರಸಭೆ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗನ್ನಾಥ ರೈ, ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಸಂಯೋಜಕಿ ಕಸ್ತೂರಿ ಬೊಳುವಾರು, ಶಿಕ್ಷಣ ಸಂಪನ್ಮೂಲ ಒಕ್ಕೂಟದ ಅಧ್ಯಕ್ಷೆ ನಯನಾ ರೈ, ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ, ಸಂಸಾರ ಬೀದಿ ನಾಟಕ ತಂಡದ ಸಂಚಾಲಕ ಪತ್ರಕರ್ತ ಸಂಶುದ್ದೀನ್ ಸಂಪ್ಯ, ಸ್ಯಾಕ್ಸೋಪೋನ್ ವಾದಕ ಡಾ ಪಿ ಕೆ ಗಣೇಶ್, ದಾಮೋದರ್ ಭಂಡಾರ್‌ಕರ್, ಈಶ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಗೋಪಾಲಕೃಷ್ಣ, ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಶೆಟ್ಟಿ, ನೆಲ್ಲಿಕಟ್ಟೆ ಮಿತ್ರಮಂಡಲದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ನಿರ್ದೇಶಕ ಉಲ್ಲಾಸ್ ಪೈ, ನ್ಯಾಯವಾದಿ ರಾಜೇಶ್ವರಿ, ಸಾಮಾಜಿಕ ಕಾರ್ಯಕರ್ತ ಲೋಕೇಶ್ ಅಲುಂಬಡ, ಸುದರ್ಶನ್ ಮುರ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.


ಮಕ್ಕಳ ಹಕ್ಕುಗಳ ಮಾಸೋತ್ಸವ ಬ್ಯಾನರ್ ಬಿಡುಗಡೆ:
ಬೀದಿ ನಾಟಕದ ಕೊನೆಯಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ನಡೆಯುವ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಹಕ್ಕುಗಳ 2023 ಇದರ ಬ್ಯಾನರ್ ಅನ್ನು ನಗರಸಭೆ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಮತ್ತು ಮಾಜಿ ಪುರಸಭೆ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ ಬಿಡುಗಡೆಗೊಳಿಸಿದರು.

LEAVE A REPLY

Please enter your comment!
Please enter your name here