ಅ.31: ಮಾಣಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 113ನೇ ಶಾಖೆ ಉದ್ಘಾಟನೆ

0

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 113ನೇ ಶಾಖೆಯು ಮಾಣಿಯ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ ನ ಪ್ರಥಮ ಅಂತಸ್ಥಿನಲ್ಲಿ ಅ.31ರಂದು ಉದ್ಘಾಟನೆಗೊಳ್ಳಲಿದೆ.

ಶಾಖೆಯನ್ನು ಬಂಟ್ವಾಳ ಶಾಸಕ ಯು. ರಾಜೇಶ್ ನಾಯ್ಕ್ ರವರು ಉದ್ಘಾಟಿಸಲಿದ್ದಾರೆ‌. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ರವರು ವಹಿಸಲಿದ್ದಾರೆ. ಪುತ್ತೂರು‌‌ ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ರವರು ಗಣಕೀಕರಣ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ನವೋದಯ ಸ್ವಸಹಾಯ ಸಂಘಗಳ ಉದ್ಘಾಟನೆ ಮಾಡಲಿದ್ದಾರೆ. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ ಕೆ. ಮಾಣಿ ಸಾಲಪತ್ರ ವಿತರಣೆ ಮಾಡಲಿದ್ದಾರೆ‌. ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪುಷ್ಪರಾಜ ಚೌಟ ರವರು ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ಶಾಖಾ ಕಟ್ಟಡದ ಮಾಲಕ ಎಮ್. ನಾರಾಯಣ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ‌ ಎಂದು ನಿರ್ದೇಶಕ ಶಶಿಕುಮಾರ್ ರೈ ಬಿ. ಹಾಗೂ ಟಿ.ಜಿ. ರಾಜಾರಾಮ್ ಭಟ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here