ಪುತ್ತೂರು: ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣಾ ಹಿನ್ನಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯ ಬಗ್ಗೆ ಪುತ್ತೂರು ಮಿನಿವಿಧಾನ ಸೌಧದ ತಹಶೀಲ್ದಾರ್ ಸಭಾಂಗಣದಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು. ಉಪತಹಶೀಲ್ದಾರ್ ಸುಲೋಚನಾರವರು ಮಾಹಿತಿ ನೀಡಿ ಆರು ವರ್ಷಕ್ಕೊಮ್ಮೆ ನಡೆಯುವ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳ ಮೂಲಕ ಅರ್ಜಿ ತೆಗೆದುಕೊಂಡು ಮತದಾರರ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ನಮೂನೆ 18ರಲ್ಲಿ ಪದವಿಧರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲಾಗುತ್ತಿದೆ ಎಂದರು. ಹೆಸರು ಸೇರ್ಪಡೆಗೆ ನ.6 ಕೊನೆಯ ದಿನವಾಗಿದೆ ಎಂದರು. ತಹಶೀಲ್ದಾರ್ ಶಿವಶಂಕರ್ ಉಪಸ್ಥಿತರಿದ್ದರು.