ನಾಣಿಲ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

0

ಕಾಣಿಯೂರು: ನಾಣಿಲ ಸ.ಹಿ.ಪ್ರಾ ಶಾಲೆಯಲ್ಲಿ 2023- 2024ನೇ ಸಾಲಿನ ಪ್ರಥಮ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ದಲಾರಿಯವರು ವಹಿಸಿದ್ದರು. ಶಿಕ್ಷಣ ಇಲಾಖೆಯ ಮಾರ್ಗದರ್ಶಕರಾಗಿ ಕಾಣಿಯೂರು ಹೈಸ್ಕೂಲಿನ ದೈಹಿಕ ಶಿಕ್ಷಕಿ ಲಕ್ಷ್ಮಿಯವರು ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಣಿಯೂರು ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಗಂಗಮ್ಮ ಗುಜ್ಜರ್ಮೆ, ಮುಖ್ಯಗುರು ಪದ್ಮಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಕುಸುಮಾವತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಪೋಷಕರು ಭಾಗವಹಿಸಿದರು. ಗೌರವ ಶಿಕ್ಷಕಿಯಾದ ಚೇತನ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here