ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಸನ್ಮಾನಕ್ಕೆ 10 ಆಯ್ಕೆ ಮಾಡಲಾಗಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ಮಾರ್ಗದರ್ಶನದಲ್ಲಿ 5 ಮಂದಿಯ ಆಯ್ಕೆ ಸಮಿತಿಯಿಂದ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಹಿರಿಯ ಪ್ರಸೂತಿ ತಜ್ಞ ಡಾ.ಸುಬ್ರಾಯ ಭಟ್, ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಎ.ಪಿ ಶ್ರೀನಿವಾಸ್ ಮರಿಕೆ, ಸಾಹಿತ್ಯ ಕ್ಷೇತ್ರದಲ್ಲಿ ನಿರ್ಮಲಾ ಸುರತ್ಕಲ್, ಶಿಕ್ಷಣ ಕ್ಷೇತ್ರದಲ್ಲಿ ನಿವೃತ್ತ ಶಿಕ್ಷಕ ನಾರಾಯಣ ಕೆ, ಕ್ರೀಡಾ ಕ್ಷೇತ್ರದಲ್ಲಿ ದಯಾನಂದ ರೈ ಕೋರ್ಮಂಡ, ರಂಗಭೂಮಿಯಲ್ಲಿ ಸುಂದರ ರೈ ಮಂದಾರ, ಶಿಕ್ಷಣ ಸಮನ್ವಯದಲ್ಲಿ ಸುದಾನ ವಸತಿಯುತ ಶಾಲೆಯ ಸಂಚಾಲಕ ರೇ ವಿಜಯ ಹಾರ್ವಿನ್, ಸಮಾಜ ಸೇವೆಯಲ್ಲಿ ಸರಕಾರಿ ಆಸ್ಪತ್ರೆಯ ಡಾ.ಅಜಯ್, ಸಾಹಿತ್ಯ ಸಂಘಟನೆಯಲ್ಲಿ ನಾರಾಯಣ ಕುಂಬ್ರ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಸಿದ್ದಿಕ್ ನಿರಾಜೆ ಅವರನ್ನು ಆಯ್ಕೆ ಮಾಡಲಾಗಿದೆ.
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಸೀಲ್ದಾರ್ ಜೆ ಶಿವಶಂಕರ್, ಸಮಿತಿ ಸಂಚಾಲಕರಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ನ್ಯಾಯವಾದಿ ಬೆಟ್ಟ ಈಶ್ವರ ಭಟ್, ಉಪನ್ಯಾಸಕ ನರೇಂದ್ರ ರೈ ದೇರ್ಲ ಅವರು ಆಯ್ಕೆ ಸಮಿತಿಯಲ್ಲಿದ್ದರು.