ರಾಷ್ಟಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ 5 ಚಿನ್ನ ಹಾಗೂ ಒಂದು ಬೆಳ್ಳಿ ಪದಕ

0

ಪುತ್ತೂರು: ಮಧ್ಯಪ್ರದೇಶದ ದೇವಸ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿ 5 ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಗಳಿಸಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಗೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗಳಿಸಿರುವ ದ್ವಿತೀಯ ಪಿಯುಸಿ ಕಲಾ ವಿಭಾಗದ ಅರುಣ್ ಕುಮಾರ್ ಎಂ, ವಾಣಿಜ್ಯ ವಿಭಾಗದ ಪುಣ್ಯ, ಪ್ರಾಪ್ತಿ ಕೆ ಎಸ್, ವಿಜ್ಞಾನ ವಿಭಾಗದ ವಿನೀಶ್ ಕುಮಾರ್ ಎಸ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅದ್ವಿತ್ ಶರ್ಮ, ಮತ್ತು ಬೆಳ್ಳಿ ಪದಕ ಗಳಿಸಿದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಚೇತನ್ ಎನ್ ಆರ್ ವಿಶೇಷ ಸಾಧನೆಯನ್ನು ಮಾಡಿದ್ದಾರೆ. ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here