ರಾಮಕುಂಜ ಕ.ಮಾ.ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.
ಶಾಲಾ ಮುಖ್ಯಗುರು ಸತೀಶ್ ಭಟ್‌ರವರು ರಾಷ್ಟ್ರೀಯ ಏಕತಾ ದಿನಾಚರಣೆಯ ಕುರಿತು ಮಾಹಿತಿ ನೀಡಿದರು. ಶಾಲಾ ಸಮಾಜ ವಿಜ್ಞಾನ ಶಿಕ್ಷಕ ದಿನೇಶ್ ಬಿ.ಅವರು ವಿದ್ಯಾರ್ಥಿಗಳಿಗೆ “ರಾಷ್ಟ್ರೀಯ ಏಕತಾ ಪ್ರತಿಜ್ಞೆ”ಯನ್ನು ಬೋಧಿಸಿದರು. 10ನೇ ತರಗತಿಯ ವಿದ್ಯಾರ್ಥಿ ಚರಣ್ “ರಾಷ್ಟ್ರೀಯ ಏಕತಾ ದಿನ”ದ ಆಚರಣೆಯ ಕುರಿತು ಭಾಷಣ ಮಾಡಿದನು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here