ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ನ.1ರಂದು 68ನೇ ಕನ್ನಡ ರಾಜ್ಯೋತ್ಸವವನ್ನು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ಆಚರಿಸಲಾಯಿತು.
ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್.ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಆಡಳಿತಾಧಿಕಾರಿ ಆನಂದ ಎಸ್.ಟಿ.,ಅವರು ದೀಪ ಬೆಳಗಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ಕನ್ನಡ ನಾಡು-ನುಡಿ ಸಂಸ್ಕೃತಿಯ ಏಳಿಗೆಗಾಗಿ ನಾವೆಲ್ಲರೂ ಶ್ರಮಿಸೋಣ. ಮುಂದಿನ ಪೀಳಿಗೆಗಾಗಿ ಸಾಗಿಸುವಂತಹ ಕೆಲಸ ಯುವ ಪೀಳಿಗೆಯಿಂದ ನಡೆಯಬೇಕು ಎಂದರು. ಸಹಶಿಕ್ಷಕಿ ಹರಿಣಿಯವರು ಕನ್ನಡ ನಾಡು ನುಡಿಯ ವೈಶಿಷ್ಠ್ಯ ಹಾಗೂ ಪ್ರಚಲಿತ ಸಮಸ್ಯೆಗಳ ಬಗ್ಗೆ ತಿಳಿಸಿದರು. ವಿದ್ಯಾರ್ಥಿನಿ ಪ್ರಜ್ಞಾ ಕನ್ನಡ ರಾಜ್ಯೋತ್ಸವ ಆಚರಣೆಯ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು 5 ಕವಿಗಳ ಕನ್ನಡ ಗೀತೆಗಳನ್ನು ಹಾಡಿದರು. ಸಹಶಿಕ್ಷಕ ವಸಂತ್ ಹಾಗೂ ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ವ್ಯವಸ್ಥಾಪಕ ರಮೇಶ್ ರೈ ಆರ್.ಬಿ., ತಾಂತ್ರಿಕ ಸಲಹೆಗಾರ ಜಯೇಂದ್ರ ಬಂದ್ಯಾನ್ ಉಪಸ್ಥಿತರಿದ್ದರು. ಸಹಶಿಕ್ಷಕ ಕಿಶೋರ್ ಕುಮಾರ್ ಬಿ.,ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ಹರೀಶ್ ಆಚಾರ್ಯ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತ ಎ.ವಂದಿಸಿದರು. ಆರಂಭದಲ್ಲಿ ವಿದ್ಯಾರ್ಥಿಗಳು ನಾಡಗೀತೆ ಹಾಗೂ ರೈತ ಗೀತೆ ಹಾಡಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಲಾಯಿತು.