ಕೆಮ್ಮಾರ: ಇಲ್ಲಿನ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಅ.30ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳಿಂದ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಮಾರ್ಗದರ್ಶಿ ಶಿಕ್ಷಕಿಯಾಗಿ ಭಾಗವಹಿಸಿದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಪ್ರಾರ್ಥನಾರವರು ಮಕ್ಕಳ ಶಿಕ್ಷಣದಲ್ಲಿ ಪೋಷಕರ ಪಾತ್ರ ಕುರಿತು ಸವಿಸ್ತಾರವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ನಮ್ಮ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಜುನೈದ್ ಸರ್ ಹಾಗೂ ದಿವ್ಯ.ಕೆ ಮೇಡಂರವರನ್ನು ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಜಯಶ್ರೀ ಎಂ, ಉಪಾಧ್ಯಕ್ಷೆ ತೇಜಾವತಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಪದ್ಮನಾಭ ಶೆಟ್ಟಿ ಬಡಿಲ, ಷರೀಫ್ ಯು.ಟಿ, ಅಬ್ಬಾಸ್ , ಖಾದರ್ ಅಡೆಕ್ಕಲ್, ಹಿದಾಯತುಲ್ಲಾ, ಸುಮಯ್ಯ ಹಾಗೂ ಅಧ್ಯಾಪಕ ವೃಂದದವರು, ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಸುಮನ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ವಂದಿಸಿದರು, ಮೆಹನಾಝ್ ಕಾರ್ಯಕ್ರಮ ನಿರೂಪಿಸಿದರು.