ರೈ ಚಾರಿಟೇಬಲ್ ಟ್ರಸ್ಟ್ ವಾರ್ಷಿಕ ಮಹಾಸಭೆ, ಸಮಾವೇಶ – ಸಮಾವೇಶಕ್ಕೆ 50 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ: ಅಶೋಕ್ ರೈ

0

ಪುತ್ತೂರು: ನವೆಂಬರ್ 13ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ ಟ್ರಸ್ಟ್ ನ ಮಹಾಸಭೆ ಹಾಗೂ ಟ್ರಸ್ಟ್ ನ ಫಲಾನುಭವಿಗಳಿಗೆ ವಸ್ತ್ರ ವಿತರಣಾ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು‌ 50 ಸಾವಿರಕ್ಕೂ‌ ಮಿಕ್ಕಿ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಇದ್ದು‌ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಶಾಸಕರ ಸಭಾಭವನದಲ್ಲಿ‌ನಡೆದ ‌ಟ್ರಸ್ಟ್ ನ ಪ್ರಮುಖರ ಸಭೆಯಲ್ಲಿ ಈ ಮಾಹಿತಿ ನೀಡಿದರು.‌ ಸಭೆಯಲ್ಲಿ ಭಾಗವಹಿಸುವ ಎಲ್ಲರಿಗೂ ವಸ್ತ್ರ ವಿತರಣೆ ನಡೆಯಲಿದ್ದು, ಅವರ ಜೊತೆ ಸಹಭೋಜನವೂ ನಡೆಯಲಿದೆ. ಗ್ರಾಮ ಗ್ರಾಮಗಳಲ್ಲಿ ಸ್ವಾಗತ ಸಮಿತಿಯನ್ನು‌ರಚಿಸಲಾಗಿದ್ದು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು‌ ಭಾಗವಹಿಸುವಂತೆ ಶಾಸಕರು ಮನವಿ ಮಾಡಿದರು. ಸಭೆಯಲ್ಲಿ ಟ್ರಸ್ಟ್ ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಪ್ರಮುಖರಾದ ಸುಮಾ ಅಶೋಕ್ ರೈ, ನಿಹಾಲ್ ಶೆಟ್ಟಿ, ರಾಕೇಶ್ ರೈ ಕುದ್ಕಾಡಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here