ನೂಜಿಬಾಳ್ತಿಲ ಗ್ರಾ.ಪಂ.ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದ ಅಂಗವಾಗಿ ಧ್ವಜಾರೋಹಣ, ರಾಷ್ಟ್ರಗೀತೆ ,ನಾಡಗೀತೆ ,ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ ಐದು ಕನ್ನಡ ಗೀತೆಗಳು ಹಾಡುವ ಮೂಲಕ ನುಡಿ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಆಡಳಿತ ಮಂಡಳಿಯ ಸದಸ್ಯರು ,ಪಂಚಾಯತ್ ಅಭಿವೃಧಿ ಅಧಿಕಾರಿಯವರು, ಸಿಬ್ಬಂದಿ ವರ್ಗದವರು,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎಂ. ಬಿ . ಕೆ . ,
ಎಲ್. ಸಿ .ಆರ್ .ಪಿ. ಪಂಚಶ್ರೀ ಸ೦ಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ,ಸ್ವ ಸಹಾಯ ಸಂಘಗಳು ಮತ್ತು ಸದಸ್ಯರುಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ತುಳುನಾಡು ತುಡರ್ ಯುವಕ ಮಂಡಲ ನೂಜಿಬೈಲ್ ಇದರ ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಹಾಗೂ ಗ್ರಾಮಸ್ಥರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here