ವಿದ್ಯಾರಶ್ಮಿಯಲ್ಲಿ ಕನ್ನಡ ರಾಜ್ಯೋತ್ಸವ

0

ಪುತ್ತೂರು: ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವದ ಅಂಗವಾಗಿ ವಿದ್ಯಾರಶ್ಮಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಚಾಲಕ ಸವಣೂರು ಸೀತಾರಾಮ ರೈ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಕ್ನನಡಾಭಿಮಾನ ಇರಬೇಕು. ಆದರೆ ಇತರ ಭಾಷೆಗಳನ್ನು ದ್ವೇಷಿಸಬಾರದು. ಕನ್ನಡ ಭಾಷೆ ಉಳಿದರೆ ಕನ್ನಡ ಸಂಸ್ಕೃತಿ ಉಳಿಯುತ್ತದೆ ಎಂದರು.


ವಿದ್ಯಾರ್ಥಿಗಳಾದ 9ನೆ ತರಗತಿಯ ಪ್ರಾಪ್ತಿ ಪಿ. ಮತ್ತು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಸನಾ ಫಾತಿಮತ್ ಹಾಗೂ ಕನ್ನಡ ಶಿಕ್ಷಕಿ ಚೇತನಾ ಧನಂಜಯ್ ಕನ್ನಡ ಭಾಷೆ, ಸಂಸ್ಕೃತಿಗಳ ಕುರಿತು ಮಾತನಾಡಿದರು. ಶಮಾ ಮತ್ತು ಬಳಗ ಪ್ರಾರ್ಥಿಸಿ, 7ನೆ ತರಗತಿ ಆಯಿಷತ್ ಜಸ್ನಾ ಸ್ವಾಗತಿಸಿ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ತೃಷಾ ನಿರೂಪಿಸಿ, 9ನೆ ತರಗತಿಯ ಅಪೂರ್ವ ಗೋಕುಲ್‌ದಾಸ್ ಸುಳ್ಯ ವಂದಿಸಿದರು.

ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲ ಸೀತಾರಾಮ ಕೇವಳ ಮತ್ತು ಉಪ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಮಕ್ಕಳಿಗೆ ನಾಡಗೀತೆ ಗಾಯನ ಸ್ಪರ್ಧೆ, ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆ ಮತ್ತು ಹಾಸ್ಯ ಭರಿತ ಪ್ರಶ್ನೆಗಳಿಗೆ ಉತ್ತರಿಸುವ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡಲಾಯಿತು.

LEAVE A REPLY

Please enter your comment!
Please enter your name here