ಉಪ್ಪಿನಂಗಡಿ ಇಂದ್ರಪ್ರಸ್ಥದಲ್ಲಿ ಕನ್ನಡ ರಾಜ್ಯೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ೬೮ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಆಡಳಿತ ಸದಸ್ಯ ಸುಧಾಕರ್ ಶೆಟ್ಟಿ ಧ್ವಜಾರೋಹಣಗೈದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹ ಶಿಕ್ಷಕಿ ಶ್ರೀಮತಿ ನಿಶಿತಾ ಕೆ.ಕೆ ಮಾತನಾಡಿ, ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.


ಕನ್ನಡ ನಾಡು ನುಡಿಯ ಕುರಿತಂತೆ ಏರ್ಪಡಿಸಿದ ಕವನ ರಚನಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ತಮ್ಮ ಕವನಗಳನ್ನು ವಾಚಿಸಿದರು. ಈ ಸಂದರ್ಭದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ೮ನೇ ತರಗತಿಯ ವಿದ್ಯಾರ್ಥಿನಿ ಅನುಷಾ ಜೈನ್ ಕನ್ನಡರಾಜ್ಯೋತ್ಸವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಕುರಿತ ಸಮೂಹ ಗೀತೆಗಳ ಗಾಯನ ನಡೆಯಿತು.


ಬಳಿಕ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಸದಾಶಿವ ಶಿವಗಿರಿ ಕಲ್ಲಡ್ಕ ರಚಿಸಿ ನಿರ್ದೇಶಿಸಿದ ಬೆಳಕಿನ ದಾರಿ ಎಂಬ ವಿಜ್ಞಾನ ನಾಟಕ ಪ್ರದರ್ಶನಗೊಂಡಿತು. ಈ ಸಂದರ್ಭ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಕೆ ಪ್ರಕಾಶ್, ಉಪನ್ಯಾಸಕ ವೃಂದ ಹಾಗೂ ಶಿಕ್ಷಕ – ಶಿಕ್ಷಕೇತರ ವೃಂದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಆಹ್ನಾ ಎ. ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಪೋಟೋ: ಇಂದ್ರಪ್ರಸ್ಥ

LEAVE A REPLY

Please enter your comment!
Please enter your name here