ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿದ್ಯಾಭಾರತಿ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ರಾವ್ ಭೇಟಿ

0

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ರಾವ್ ಮತ್ತು ವಿದ್ಯಾಭಾರತಿ ಉಚ್ಛ ಶಿಕ್ಷಣ ಸಂಸ್ಥಾನದ ಜಂಟಿ ಸಂಘಟನಾ ಕಾರ್ಯದರ್ಶಿ ಅವರು ನ.2ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ದ.ಕ.ಜಿಲ್ಲೆಯಾದ್ಯಂತ ವಿದ್ಯಾಭಾರತಿ ಶಿಕ್ಷಾ ಸಂಸ್ಥಾನಕ್ಕೆ ಒಳಪಟ್ಟ ಸಂಸ್ಥೆಗಳಿಗೆ ಅವರು ಭೇಟಿ ನೀಡುವ ಹಿನ್ನೆಲೆಯಲ್ಲಿ ಪುತ್ತೂರಿಗೆ ಆಗಮಿಸಿದ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಗ್ಗಿನ ಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ನಾರಾವಿ, ನಗರಸಭಾ ಸ್ಥಳೀಯ ಸದಸ್ಯ ವಾಸ್ತುಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಡಾ| ಶೋಭಿತಾ ಸತೀಶ್ ರಾವ್, ಕಲ್ಲಡ್ಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here