





ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಮರಕ್ಕಡ, ಪ್ರಭಾರ ಅಭಿವೃದ್ಧಿ ಅಧಿಕಾರಿ ನಾರಾಯಣ್, ಸದಸ್ಯರಾದ ಲೋಹಿತಾಕ್ಷ ಕೆಡೆಂಜಿಕಟ್ಟ, ವಿಠಲ ಗೌಡ ಅಗಳಿ, ತಾರಾ ಅನ್ಯಾಡಿ, ಕುಸುಮಾ ಅಂಕಜಾಲು, ಲೆಕ್ಕಸಹಾಯಕಿ ಸುನಂದಾ, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ಗೌರಿ, ಅಂಗನವಾಡಿ ಕಾರ್ಯಕರ್ತೆ ಕಮಲ ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು. ಬೆಳಂದೂರು ಶಾಲಾ ವಿದ್ಯಾರ್ಥಿಗಳಿಂದ ಗಾಯನ ನಡೆಸಿಕೊಟ್ಟರು.











