ಉಜಿರೆ :ಗೃಹ ‘ಟೆಕ್ನಿಕಲ್ ಎಕ್ಸ್ಪೋ ಕಾರ್ಯಕ್ರಮ

0

ಬಡಗನ್ನೂರುಃ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಇಲ್ಲಿನ ಸಿವಿಲ್ ಇಂಜಿನಿಯರಿಂಗ್ ವಿಭಾಗವು ‘ಗೃಹ ‘ಟೆಕ್ನಿಕಲ್ ಎಕ್ಸ್ಪೋ ಕಾರ್ಯಕ್ರಮವನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿದ್ದ  ಸಿವಿಲ್ ಎಂಜಿನಿಯರ್ ವಿಜಯ ವಿಷ್ಣು ಮಯ್ಯ ಭವಿಷ್ಯದ ಸಿವಿಲ್ ಎಂಜಿನಿಯರಿಂಗ್‌ ಕ್ಷೇತ್ರದ ಅವಶ್ಯಕತೆಯನ್ನು ಹಾಗೂ ಯುವ ಎಂಜಿನಿಯರ್ ಗಳಿಗೆ  ಶಿಸ್ತು ಮತ್ತು ಕೌಶಲ್ಯಗಳ ಅಗತ್ಯತೆ ಬಗ್ಗೆ ಮಾಹಿತಿ ನೀಡಿದರು.

ನಟ ದೀಪಕ್ ರೈ  ಪಾಣಾಜೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ ಸತೀಶ್ ಚಂದ್ರ ಎಸ್ ಮಾತನಾಡಿ ದೇಶದ ಅಭಿವೃದ್ಧಿಗೆ ಸಿವಿಲ್ ಇಂಜಿನಿಯರ್ ಕ್ಷೇತ್ರದ ಮಹತ್ವವನ್ನು ತಿಳಿಸಿಕೊಟ್ಟರು.ಎಂಜಿನಿಯರ್ ಜಗದೀಶ್ ಪ್ರಸಾದ್ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ ವಹಿಸಿಕೊಂಡಿದ್ದರು .ಉಪನ್ಯಾಸಕ ಸಂಪತ್ ಸ್ವಾಗತಿಸಿ ,ಕಾರ್ಯಕ್ರಮವನ್ನು ನಿರೂಪಿಸಿದರು.ವಿಭಾಗ ಮುಖ್ಯಸ್ಥೆ   ತ್ರೀಪ್ರತಿ ಆರ್ ರೈ ವಂದಿಸಿದರು.    

ಗೃಹ ಟೆಕ್ನಿಕಲ್ ಎಕ್ಸ್ಪೋದಲ್ಲಿ  ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿದ ವಿವಿಧ ತಾಂತ್ರಿಕ ಮಾದರಿಗಳು ಮತ್ತು ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದ ವಿವಿಧ ವಸ್ತುಗಳನ್ನು ಪ್ರದರ್ಶಿಸಲಾಯಿತು.ಸ್ಥಳೀಯ ಸುಮಾರು 15೦೦ಕ್ಕೂ ಹೆಚ್ಚು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.

LEAVE A REPLY

Please enter your comment!
Please enter your name here