ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಾರ್ಷಿಕೋತ್ಸವ

0

*ಮಾನವೀಯತೆ, ಉತ್ತಮ ಮೌಲ್ಯವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಿ- ಗಿರೀಶ್ ನಂದನ್
*ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ- ಹೇಮನಾಥ ಶೆಟ್ಟಿ

ಪುತ್ತೂರು: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಾರ್ಷಿಕೋತ್ಸವ ಅ.31 ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು
ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಕಾರ‍್ಯಕ್ರಮ ಉದ್ಘಾಟಿಸಿ. ವಿದ್ಯಾರ್ಥಿಗಳು ಮಾನವೀಯತೆ ಹಾಗೂ ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಸಂಸ್ಥೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿಯವರ ನಾಯಕತ್ವದಲ್ಲಿ ಶಾಲೆಯು ಅತ್ಯುತ್ತಮವಾದ ಪ್ರಗತಿಯನ್ನು ಸಾಧಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.


ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ- ಹೇಮನಾಥ ಶೆಟ್ಟಿ:
ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿರವರು ಅಧ್ಯಕ್ಷತೆ ವಹಿಸಿ, ಮಾತನಾಡಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯು ವಿಜ್ಞಾನ ಕ್ಷೇತ್ರದಲ್ಲಿ ದಾಖಲೆಯನ್ನು ನಿರ್ಮಿಸಿದೆ. ನಮ್ಮ ಸಂಸ್ಥೆಯ ೨೨ ವಿದ್ಯಾರ್ಥಿಗಳು ಅಂತರಾಪ್ಟ್ರೀಯ ಮಟ್ಟದಲ್ಲಿ ಸಾಧನೆಗೈಯುವ ಮೂಲಕ ವಿಜ್ಞಾನ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡಿದ್ದಾರೆ. ಒಳ್ಳೆಯ ಶಿಕ್ಷಣವನ್ನು ನುರಿತ ಶಿಕ್ಷಕರಿಂದ ನೀಡುವ ಮೂಲಕ ಸಂಸ್ಥೆಯು ಬಹುದೊಡ್ಡ ಸಾಧನೆಯನ್ನು ಮಾಡಿದೆ ಎಂದು ಹೇಳಿದರು. ‘ಸಹಕಾರ ರತ್ನ’ ದಂಬೆಕ್ಕಾನ ಸದಾಶಿವ ರೈಯವರು ನಮ್ಮ ಸಂಸ್ಥೆಗೆ ಸುಮಾರು ೪ ಲಕ್ಷ ರೂ ವೆಚ್ಚದ ವಿಜ್ಞಾನ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಹೇಮನಾಥ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.


ಬಹುದೊಡ್ಡ ಕೊಡುಗೆಯಾಗಿದೆ- ಕುಕ್ಕುವಳ್ಳಿ:
ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿರವರು ಮಾತನಾಡಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಾಧನೆಯು ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆಯಾಗಿದೆ ಎಂದರು.


ಪರಿಪೂರ್ಣ ಶಿಕ್ಷಣ- ಸುಹಾಸ್ :
ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷ ಹಾಗೂ ಕೃಷಿಕ ಉದ್ಯಮಿ ಸುಹಾಸ್ ಎ.ಪಿ.ಎಸ್‌ರವರು ಮಾತನಾಡಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯು ನೀಡುತ್ತಿರುವ ಪರಿಪೂರ್ಣ ಶಿಕ್ಷಣ, ವಿದ್ಯಾರ್ಥಿಯ ಕಲಿಕೆಗೆ ವರದಾನವಾಗಿದೆ ಎಂದರು.


ಸಾಧನೆಯನ್ನು ಮಾಡುತ್ತಿದೆ- ದಯಾನಂದ ರೈ :
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತುರವರು ಮಾತನಾಡಿ ಕಾವು ಹೇಮನಾಥ ಶೆಟ್ಟಿಯವರ ಸಂಚಾಲಕತ್ವದಲ್ಲಿ ಸಂಸ್ಥೆಯು ಅಭೂತಪೂರ್ವ ಸಾಧನೆಯನ್ನು ಮಾಡುತ್ತಿದೆ ಎಂದು ಪ್ರಶಂಸಿಸಿದರು.

ಹೃದಯ ತುಂಬಿ ಬಂದಿದೆ- ಸದಾಶಿವ ರೈ:
‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತ ದಂಬೆಕ್ಕಾನ ಸದಾಶಿವ ರೈರವರು ಮಾತನಾಡಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳ ಪ್ರಗತಿಯನ್ನು ನೋಡಿ ಹೃದಯ ತುಂಬಿ ಬಂದಿದೆ ಎಂದು ಹೇಳಿ ಶುಭಹಾರೈಸಿದರು.


ಡಾ. ಬಿ. ನಳಿನಿ ರೈಯವರ ಪುತ್ರಿ ಪ್ರತಿಮಾ ಹೆಗ್ಡೆ ಸಂದರ್ಭೋಚಿತವಾಗಿ ಮಾತನಾಡಿದರು. ಪುತ್ತೂರು ಮೂಕಾಂಬಿಕಾ ಗ್ಯಾಸ್ ಏಜೆನ್ಸೀಸ್ ಮಾಲಕ ಸಂಜೀವ ಆಳ್ವ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣ ನಾಯ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸರ್ವೇಶ್ ರಾಜೇ ಅರಸ್, ವಿದ್ಯಾರ್ಥಿ ನಾಯಕ ಗೌತಮ್ ವಿ. ಅಂಚನ್ ಉಪಸ್ಥಿತರಿದ್ದರು.

ಸನ್ಮಾನ: ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಸುನೀತಾರವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ತಾಲೂಕು ಯುವ ಬಂಟರ ಸಂಘದ ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಸುದ್ದಿ ಬಿಡುಗಡೆ ವರದಿಗಾರ ಉಮಾಪ್ರಸಾದ್ ರೈ ನಡುಬೈಲು, ಮಹಿಳಾ ಬಂಟರ ಸಂಘದ ಪ್ರಧಾನ ಕಾರ‍್ಯದರ್ಶಿ ಹರಿಣಾಕ್ಷಿ ಜೆ.ಶೆಟ್ಟಿ, ಮಾತೃ ಸಂಘದ ನಿರ್ದೇಶಕಿ ವಾಣಿ ಶೆಟ್ಟಿ,ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ಮನೋಹರ್ ರೈ, ನಿವೃತ್ತ ವಿಜ್ಞಾನ ಶಿಕ್ಷಕಿ ವಸಂತಿ, ಲೇಖಕಿ ಮಲ್ಲಿಕಾ ಜೆ. ರೈರವರುಗಳು ಅತಿಥಿಗಳನ್ನು ಗೌರವಿಸಿದರು. ಸಮಾರಂಭದಲ್ಲಿ ಜಿ.ಪಂ, ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಕಾವು, ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಹಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ಬಂಟರ ಸಂಘದ ನಿರ್ದೇಶಕ ನಿತ್ಯಾನಂದ ಶೆಟ್ಟಿ ಮನವಳಿಕೆ, ತಾಲೂಕು ಯುವ ಬಂಟರ ಸಂಘದ ಸಂಚಾಲಕ ರವಿಪ್ರಸಾದ್ ಶೆಟ್ಟಿ ಬನ್ನೂರು ಸಹಿತ ಸಾವಿರಾರು ಮಂದಿ ಭಾಗವಹಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮೀ ವರದಿ ವಾಚಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಸುನೀತಾ ಸ್ವಾಗತಿಸಿ, ಶಿಕ್ಷಕಿಯರಾದ ಗಾಯತ್ರಿ, ಸಂಧ್ಯಾರವರು ಕಾರ‍್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪವಿತ್ರ ಸಹಕರಿಸಿದರು. ಸಭಾ ಕಾರ‍್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಮಕ್ಕಳ ನೃತ್ಯೋತ್ಸವ
ಸಂಜೆ ಮಕ್ಕಳ ನೃತ್ಯೋತ್ಸವ ಕಾರ‍್ಯಕ್ರಮವನ್ನು ‘ಸಹಕಾರ ರತ್ನ’ ದಂಬೆಕ್ಕಾನ ಸದಾಶಿವ ರೈಯವರು ದೀಪಬೆಳಗಿಸಿ, ಉದ್ಘಾಟಿಸಿದರು. ಸಂಸ್ಥೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಯಕ್ಷಗಾನ ಕಲಾವಿದ ಕೆ.ಎಚ್.ದಾಸಪ್ಪ ರೈ ಬಪ್ಪಳಿಗೆ, ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕಿ ರೂಪಕಲಾ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ, ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕಿ ವಾಣಿ ಶೆಟ್ಟಿ ನೆಲ್ಯಾಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here