ನ.3:ಫಿಲೋಮಿನಾ ಕ್ರೀಡಾಂಗಣದಲ್ಲಿ ತಾಲೂಕು ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕ-ಬಾಲಕಿಯರ ಕ್ರೀಡಾಕೂಟ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕ-ಬಾಲಕಿಯರ ಕ್ರೀಡಾಕೂಟವು ನ.3 ರಂದು ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಜರಗಲಿದೆ.
ಬೆಳಗ್ಗಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಯಿದೆ ದೇವುಸ್ ವಿದ್ಯಾಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್ ರವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋ, ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾರವರು ಉಪಸ್ಥಿತಲಿರುವರು ಎಂದು ಫಿಲೋಮಿನಾ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋ ಹಾಗೂ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here