ನೆಲ್ಯಾಡಿಯ ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಸಚಿನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕನ್ನಡ ಭಾಷೆಯ ಐತಿಹಾಸಿಕ ಹಿನ್ನೆಲೆಯ ಕುರಿತು ಇಂದಿನ ಯುವ ಸಮುದಾಯ ವಿಸ್ಮೃತಿಗೆ ಒಳಗಾಗಬಾರದು ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಮೃದ್ಧವಾದ ಸುಂದರ ಭಾಷೆ ಕನ್ನಡ ಬದುಕನ್ನು ನನ್ನದಾಗಿಸಿಕೊಂಡಿದ್ದಕ್ಕೆ ಹೆಮ್ಮೆಯಿದೆ ಎಂದರು.
ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಯೋಜಿಸಿದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ನೂರಂದಪ್ಪ ಸ್ವಾಗತಿಸಿದರು. ಮಧುಶ್ರೀ, ಭಾರತಿ, ಅನನ್ಯ, ಶಿಲ್ಪಾ, ಯಕ್ಷಿತಾ, ಕಾವ್ಯ, ಹಾಗೂ ವಿದ್ಯಾರ್ಥಿಗಳಾದ ಅಮೀರ್, ಮನೋರಾಜ್ ವಿಶೇಷ ಕನ್ನಡ ಗೀತೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.