ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಜೀವ ನಾಯ್ಕ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವಂತೆ ತಿಳಿಸಿದರು. ಮಾರ್ಗದರ್ಶಿ ಶಿಕ್ಷಕಿಯಾಗಿ ಭಾಗವಹಿಸಿದ ದೀಪ ಅವರು ಮಾತನಾಡಿ, ಪೋಷಕರಿಗೆ ಮಕ್ಕಳ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು. ಶಾಲಾ ದಾನಿ ಜತೀಂದ್ರ ಶೆಟ್ಟಿ ಮಾತನಾಡಿ, ಪೋಷಕರ ಜವಾಬ್ದಾರಿ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಜಯಮ್ಮ ಉಪಸ್ಥಿತರಿದ್ದರು.
ಸಭೆಯಲ್ಲಿ ಮಕ್ಕಳ ಪ್ರಗತಿ ಪರಿಶೀಲನೆಯ ಬಗ್ಗೆ ಚರ್ಚೆಗಳನ್ನು ನಡೆಸಲಾಯಿತು. ಬಳಿಕ ಎಸ್‌ಡಿಎಂಸಿ ಸಭೆ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಾಲಾ ಮುಖ್ಯ ಗುರು ಶ್ರೀಮತಿ ಕಾವೇರಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಪದ್ಮ ವಂದಿಸಿದರು. ಅತಿಥಿ ಶಿಕ್ಷಕಿ ಶ್ರೀಮತಿ ಗೀತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಉಷಾಕುಮಾರಿ, ಪೂರ್ಣಿಮಾ, ಅಶ್ವಿನಿ ಸಹಕರಿಸಿದರು.