ಉಪ್ಪಿನಂಗಡಿ ಸ.ಪ್ರ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಘಟಕ ಉದ್ಘಾಟನೆ

0

ಉಪ್ಪಿನಂಗಡಿ: ಎನ್ನೆಸ್ಸೆಸ್‌ನಲ್ಲಿ ಕಾರ್ಯನಿರ್ವಹಿಸುವ ಸ್ವಯಂ ಸೇವಕರು ಮೌಲ್ಯ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣಪ್ರಕಾಶ್ ತಿಳಿಸಿದರು.ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಘಟಕಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಸಹಿಷ್ಣುತಾ ಭಾವ, ತಾಳ್ಮೆ, ನೈತಿಕತೆ ವ್ಯಕ್ತಿತ್ವದ ಭಾಗವಾದಾಗ ಯಶಸ್ಸು ಸಾಧ್ಯ ಎಂದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಮಾತನಾಡಿ, ಸೇವಾ ಯೋಜನೆಯಲ್ಲಿ ಕಾರ್ಯನಿರ್ವಹಿಸಲು ಶೌರ್ಯದ ಅವಶ್ಯಕತೆ ಇದೆ. ಎನ್ನೆಸ್ಸೆಸ್ ಸ್ವಯಂಸೇವಕರು ರಾಷ್ಟ್ರೀಯ ಸೇವಾ ಯೋಜನೆಯ ಆದರ್ಶಗಳಿಗೆ ಸಾಕ್ಷಿ ಆಗಬೇಕು. ಕಾರ್ಯಚಟುವಟಿಕೆಯಲ್ಲಿ ಸ್ವಯಂಸೇವಕರ ತೊಡಗಿಸಿಕೊಳ್ಳುವಿಕೆ ಅವರ ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತದೆ ಎಂದರು.


ಈ ಸಂದರ್ಭದಲ್ಲಿ ಎನ್ನೆಸ್ಸೆಸ್ ಭಿತ್ತಿಪತ್ರ “ಅಂತರಂಗ- ಸೇವಾ ಮನೋಭಾವದ ಸಾಹಿತ್ಯಿಕ ವೇದಿ”ಕೆ ಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಎನ್ನೆಸ್ಸೆಸ್ ಯೋಜನಾಧಿಕಾರಿಗಳಾದ ಡಾ. ಹರಿಪ್ರಸಾದ್ ಎಸ್. ಹಾಗೂ ಕೇಶವ್ ಕುಮಾರ್ ಉಪಸ್ಥಿತರಿದ್ದರು.
ಎನ್ನೆಸ್ಸೆಸ್‌ನ ಘಟಕ ನಾಯಕರಾದ ಚೈತನ್ಯ ಸ್ವಾಗತಿಸಿದರು, ಹರ್ಷಿತಾ ಪಿ. ವಂದಿಸಿದರು. ಯತೀಶ್ ಯು. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here