ಗುಂಡು ಎಸೆತ: ರಾಮಕುಂಜ ಕ.ಮಾ.ಪ್ರೌಢಶಾಲೆಯ ಚರಣ್ ರಾಜ್ಯಮಟ್ಟಕ್ಕೆ ಆಯ್ಕೆ

0

ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡಬಿದ್ರೆ ಇವರ ಆಶ್ರಯದಲ್ಲಿ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಚರಣ್ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈಯವರು ತರಬೇತಿ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್‌ರವರು ಮಾರ್ಗದರ್ಶನ ನೀಡಿದ್ದರು. ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ಸಹಕರಿಸಿದ್ದರು. ಚರಣ್ ಕೊಯಿಲ ಗ್ರಾಮದ ಪಾಣಿಗ ಧರ್ಣಪ್ಪ ಗೌಡ ಮತ್ತು ಜಯಂತಿ ದಂಪತಿ ಪುತ್ರ.

LEAVE A REPLY

Please enter your comment!
Please enter your name here