ನ.5: ಕೊಂಬೆಟ್ಟು ಮರಾಟಿ ಸಂಘದಲ್ಲಿ ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ

0

ಪುತ್ತೂರು: ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು ಪುತ್ತೂರು, ಮರಾಟಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಕೊಂಬೆಟ್ಟು ಇದರ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಮತ್ತು 2022-23ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನ.5ರಂದು ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ಸಭಾ ಭವನದಲ್ಲಿ ನಡೆಯಲಿದೆ.


ಬೆಳಿಗ್ಗೆ ಗಣಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಬಳಿಕ ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಮಂಜುನಾಥ ಎನ್.ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಪುಷ್ಪರಾಜ್ ಕೆ, ತೆಂಕಿಲ ವಿವೇಕಾನಂದ ಶಾಲಾ ಅಧ್ಯಾಪಕ ರಾಮ ನಾಯ್ಕ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಅನ್ನಸಂತರ್ಪಣೆ ನಡೆದು ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here