ರಾಮಕುಂಜ ಪ.ಪೂ.ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ರಾಮಕುಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಇದರ ಆಶ್ರಯದಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕಡಬ ಕೇಂದ್ರ ಒಕ್ಕೂಟದ ಸಹಕಾರದೊಂದಿಗೆ ನಡೆಯುತ್ತಿರುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನ.2ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜ್‌ನಲ್ಲಿ ನಡೆಯಿತು.
ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು ಉಧ್ಘಾಟಿಸಿದರು. ಜನಜಾಗೃತಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ವಿದ್ಶಾರ್ಥಿಗಳಿಗೆ ಸ್ವಾಸ್ಥ್ಶ ಸಂಕಲ್ಪ ಕಾರ್ಯಕ್ರಮದ ಬಗ್ಗೆ ಮಾರ್ಗದರ್ಶನ ನೀಡಿದರು. ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ಮುಖ್ಯಶಿಕ್ಷಕ ಸತೀಶ್ ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಗೋಳಿತ್ತೊಟ್ಟು ವಲಯ ಜನಜಾಗೃತಿ ವೇದಿಕೆ ಅಧ್ಶಕ್ಷ ನೋಣಯ್ಯ ಪೂಜಾರಿ ಅಂಬರ್ಜೆ, ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಶಕ್ಷ ಶಿವಪ್ರಸಾದ್ ರೈ ಮೈಲೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ನವೀನ್ ಕುಮಾರ್ ಸ್ವಾಗತಿಸಿದರು. ಶಿಕ್ಷಕ ಚೇತನ್ ಕುಮಾರ್ ವಂದಿಸಿದರು. ಗೋಳಿತೊಟ್ಟು ವಲಯ ಮೇಲ್ವಿಚಾರಕಿ ಸುಜಾತ ಬಿ ಕಾರ್ಯಕ್ರಮ ನಿರ್ವಹಿಸಿದರು. ಸೇವಾಪ್ರತಿನಿಧಿಗಳಾದ ಪ್ರೇಮಾವತಿ, ಜಯಶ್ರೀ, ಸುಮಲತಾ ಕಾರ್ಯಕ್ರಮ ಸಂಯೋಜನೆಗೆ ಸಹಕರಿಸಿದರು. ಗೋಳಿತ್ತೊಟ್ಟು ನಿಕಟಪೂರ್ವ ವಲಯಾಧ್ಯಕ್ಷ ವೀರೇಂದ್ರ ಕುಮಾರ್, ವಿಪತ್ತು ಘಟಕದ ಪ್ರತಿನಿಧಿ ಮಹೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಹೈಸ್ಕೂಲ್ ವಿಭಾಗದ ೭೧೦ ವಿದ್ಶಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here