ಏಕತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕನಾಗಿ ಪ್ರೀತಂ ಎನ್. ನೇಮಕ

0

ಪುತ್ತೂರು: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ 2022-23ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರ(6ರಿಂದ 8ನೇ ತರಗತಿ)ನ್ನು ವಿವಿಧ ಶಾಲೆಗಳಿಗೆ ನೇಮಕಾತಿ ಮಾಡಿ ಆದೇಶ ಹೊರಡಿಸಿದೆ. ಅದರಂತೆ ಪ್ರೀತಂ ಎನ್. ಅವರು ಪುತ್ತೂರು ತಾಲೂಕಿನ ಏಕತಡ್ಕ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ಆಯ್ಕೆಯಾಗಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ನಟ್ಟಿ ನಿವಾಸಿ ಇಲಾರ್ ಡಿ ಸೋಜ ಮತ್ತು ಸೆಲೆಸ್ತಿನ ಡಿ ಸೋಜರವರ ಪುತ್ರನಾಗಿರುವ ಪ್ರೀತಂ ಎನ್ . ಅವರು ಪುಣಚ ಗ್ರಾಮದ ಪರಿಯಾಲ್ತಡ್ಕ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ದೇವಿ ಪ್ರೌಢ ಶಾಲೆ ಪುಣಚ, ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಪುತ್ತೂರು ಸಂತಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದು ಪುತ್ತೂರು ವಿವೇಕಾನಂದ ಬಿ.ಎಡ್. ಕಾಲೇಜಿನಲ್ಲಿ ಬಿ.ಎಡ್. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ್ದರು. ಪ್ರಸ್ತುತ ಪ್ರೀತಂ ಎನ್. ಅವರು ಬಂಟ್ವಾಳ ತಾಲೂಕಿನ ನಟ್ಟಿಯಲ್ಲಿ ಅಪ್ಪ, ಅಮ್ಮ, ಪತ್ನಿ ಹಾಗೂ ಪುತ್ರನೊಂದಿಗೆ ವಾಸ್ತವ್ಯವಿದ್ದಾರೆ.

LEAVE A REPLY

Please enter your comment!
Please enter your name here