ಪುತ್ತೂರು: ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದಿರೆ ಇಲ್ಲಿ ನಡೆದ ವಿಶೇಷ ಸಾಮರ್ಥ್ಯ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುಂಡೂರು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಶ್ರೀತನ್ ಬಿ ಅವರು ಗುಂಡು ಎಸೆತದಲ್ಲಿ ದ್ವಿತೀಯ ಹಾಗೂ ಜಾವಲಿನ್ ಥ್ರೋದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ವನಿತಾ ಬಿ ಅವರು ತರಬೇತಿ ನೀಡಿದ್ದಾರೆ ಎಂದು ಶಾಲಾ ಮುಖ್ಯ ಗುರು ವಿಜಯಾ ಪಿ ತಿಳಿಸಿರುತ್ತಾರೆ.
![](https://puttur.suddinews.com/wp-content/uploads/2023/11/bc9b3e8e-e7e0-4941-8bfa-868ed8a435dd.jpg)