ನಾಣಿಲ ಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ವಿದಾಯ ಸಮಾರಂಭ

0

ಕಾಣಿಯೂರು: ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕರಾದ ಲೀನಾ ಲಾಸ್ರೋದು ಹಾಗೂ ಮಂಗಳಾರವರಿಗೆ ಬೀಳ್ಕೊಡುಗೆ ಸಮಾರಂಭವು ನ 4ರಂದು ನಾಣಿಲ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿ ವಹಿಸಿದರು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ನ ಅಧ್ಯಕ್ಷ ವಿಶ್ವನಾಥ ಕೊಪ್ಪ, ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ,ಗ್ರಾ. ಪಂ.ಸದಸ್ಯರಾದ ತೇಜ ಕುಮಾರಿ ಉದ್ಲಡ್ಡ, ಕೀರ್ತಿ ಕುಮಾರಿ ಅಂಬುಲ, ಕ್ಲಸ್ಟರ್ ಸಿ.ಆರ್. ಪಿ ಯಶೋದ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳು ವಿದಾಯ ಭಾಷಣ ಹಾಗೂ ವರ್ಗಾವಣೆಗೊಂಡ ಶಿಕ್ಷಕರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಾಲಾ ಮುಖ್ಯ ಗುರು ಪದ್ಮಯ್ಯ ಗೌಡ ಪ್ರಾಸ್ತಾವಿಕ ಮಾತನಾಡಿದರು.


ಹಿರಿಯರಾದ ಪದ್ಮಯ್ಯ ಗೌಡ ರಾಮುಡೆಲ್, ಶಾಲಾ ತಾಯಂದಿರ ಸಮಿತಿಯ ಅಧ್ಯಕ್ಷರಾದ ಸರೋಜಿನಿ, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕುಸುಮಾವತಿ ಉಪಸ್ಥಿತರಿದ್ದರು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗೌರವ ಶಿಕ್ಷಕಿಗಳಾದ ಚೇತನ ಸ್ವಾಗತಿಸಿ, ಜೀವಿತ ವಂದಿಸಿದರು. ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here