ನ.5: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಹಿನ್ನೆಲೆ ಭಕ್ತಾಧಿಗಳ ಸಭೆ

0

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಾ.20ರಿಂದ ನಡೆಯಲಿರುವ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನ.೫ರಂದು ಕ್ಷೇತ್ರದಲ್ಲಿ ಗ್ರಾಮಸ್ಥರ ಸಭೆ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಬೆಂಗಳೂರಿನ ಸೌಂದರ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಸೌಂದರ್ಯ ಮಂಜಪ್ಪರವರು ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಬ್ರಹ್ಮ ಕಲಶದ ವಿವಿಧ ಸಮಿತಿಗಳ ರಚನೆ ನಡೆಯಲಿದೆ. ಈ ನಿಟ್ಟಿನಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here