ನ.7: ಶಾಂತಿನಗರ ಶಾಲೆಯಲ್ಲಿ ಬಜತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ನೂತನ ರಂಗಮಂದಿರ ಉದ್ಘಾಟನೆ, ಹಳೆಯ ವಸ್ತುಗಳ ಸಂಗ್ರಹಾಲಯ ‘ಕದಿಕೆ’ ಅನಾವರಣ

0

ನೆಲ್ಯಾಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಬಜತ್ತೂರು, ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಶಾಂತಿನಗರ-ಗೋಳಿತ್ತಟ್ಟು ಇವುಗಳ ಸಹಯೋಗದಲ್ಲಿ ಬಜತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-2023 ಹಾಗೂ ನೂತನ ರಂಗಮಂದಿರ ಉದ್ಘಾಟನೆ, ಹಳೆಯ ವಸ್ತುಗಳ ಸಂಗ್ರಹಾಲಯ ‘ಕದಿಕೆ’ಅನಾವರಣ ಕಾರ್ಯಕ್ರಮ ನ.7ರಂದು ಬೆಳಿಗ್ಗೆ 9ಕ್ಕೆ ಗೋಳಿತ್ತಟ್ಟು ಶಾಂತಿನಗರ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ. ಗೋಳಿತ್ತಟ್ಟು ಗ್ರಾ.ಪಂ.ಅಧ್ಯಕ್ಷೆ ಸವಿತಾ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಕದಿಕೆ ಅನಾವರಣ ಮಾಡಲಿದ್ದಾರೆ. ಗೋಳಿತ್ತಟ್ಟು ಗ್ರಾ.ಪಂ.ಉಪಾಧ್ಯಕ್ಷ ಬಾಬು ಪೂಜಾರಿ ಕಿನ್ಯಡ್ಕ, ಸದಸ್ಯರಾದ ಬಾಲಕೃಷ್ಣ ಅಲೆಕ್ಕಿ, ಹೇಮಲತಾ, ಕಡಬ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಮಲ್‌ಕುಮಾರ್ ನೆಲ್ಯಾಡಿ, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಬಜತ್ತೂರು ಕ್ಲಸ್ಟರ್ ಸಿಆರ್‌ಪಿ ಮಂಜುನಾಥ್ ಕೆ.ವಿ.ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here