ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಲವು ವರ್ಷಗಳಿಂದ ಕೋಡಿಂಬಾಡಿ ರೈ ಎಸ್ಟೇಟ್ ನಲ್ಲಿ ನಡೆಯುತ್ತಿದ್ದ ವಸ್ತ್ರ ವಿತರಣಾ ಕಾರ್ಯಕ್ರಮವು ಕಳೆದ ವರ್ಷ ಕಿಲ್ಲೆ ಮೈದಾನದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಭಾರಿ ನ.13ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ ನ.6ರಂದು ಬೆಳಿಗ್ಗೆ ನಡೆಯಿತು.
ಕಳೆದ ಬಾರಿ 30 ಸಾವಿರ ಮಂದಿ ಅನ್ನದಾನ ಹಾಗೂ ವಸ್ತ್ರ ದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಈ ಬಾರಿ 50 ಸಾವಿರಕ್ಕೂಮಿಕ್ಕಿ ಜನರು ಭಾಗವಹಿಸುವ ನಿರೀಕ್ಷೆ ಇರುವ ಹಿನ್ನಲೆಯಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ಮತ್ತು ಅವರ ಪತ್ನಿ ಟ್ರಸ್ಟ್ನ ಮುಖ್ಯಸ್ಥೆ ಸುಮಾ ಅಶೋಕ್ ಕುಮಾರ್ ರೈ ಚಪ್ಪರ ಮುಹೂರ್ತ ನೆರವೇರಿಸಿದರು. ಈ ಸಂದರ್ಭ ಸೀತಾರಾಮ ರೈ ಹೆಗ್ಗಡೆ ಹಿತ್ತಿಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಮಾಜಿ ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ನಿಹಾಲ್ ಶೆಟ್ಟಿ, ರಿತೇಶ್ ಶೆಟ್ಟಿ, ಮುರಳೀದರ್ ರೈ ಮಟಂತಬೆಟ್ಟು, ಕೃಷ್ಣಪ್ರಸಾದ್ ಆಳ್ವ, ಪಂಜಿಗುಡ್ಡೆ ಈಶ್ವರಭಟ್, ಶಿವರಾಮ ಆಳ್ವ,ನ್ಯಾಯವಾದಿ ಅರುಣಾ ಆಳ್ವ ಟ್ರಸ್ಟಿನ ಸದಸ್ಯ ಪ್ರಮುಖರಾದ ಕೃಷ್ಣಪ್ರಸಾದ್ ಭಟ್, ಯೋಗೀಶ್ ಸಾಮಾನಿ, ಶಿವಪ್ರಸಾದ್, ರಾಕೇಶ್ ರೈಕುದ್ಕಾಡಿ,ರಾಮಣ್ಣ ಪಿಲಿಂಜ, ಚಂದ್ರಶೇಕರ ಕಲ್ಲಗುಡ್ಡೆ,ಮೊದಲಾದವರು ಉಪಸ್ಥಿತರಿದ್ದರು.