ಅಕ್ಷಯ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

0

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ “ಅದ್ವಯ” ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದ ವಿವೇಕಾನಂದ ಕಾಲೇಜು,ಇಲ್ಲಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮೈತ್ರಿ ಭಟ್, ಉನ್ನತ ಶಿಕ್ಷಣ ಹಾಗೂ ಉದ್ಯೋಗದ ದೃಷ್ಟಿಯಿಂದ ಬೇರೆ ಭಾಷೆಯನ್ನು ಕಲಿತರೂ, ಕನ್ನಡವನ್ನು ಕಡೆಗಣಿಸಬಾರದು ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕೆ ಸುಮನಾ ರಾವ್ ಮಾತನಾಡಿ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವದಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಮೇಲಿರುವ ಗೌರವ, ಅಭಿಮಾನ ಮತ್ತು ಉತ್ಸಾಹವನ್ನು ವ್ಯಕ್ತಪಡಿಸಲು ವೇದಿಕೆಯನ್ನು ಕಲ್ಪಿಸಿದಂತಾಗುತ್ತದೆ ಎಂದರು.

ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ,ಜಗತ್ತಿನ ಅತ್ಯಂತ ಸುಂದರವಾದ ಭಾಷೆ ಕನ್ನಡ,ಇದನ್ನು ಉಳಿಸುವ ಪ್ರಯತ್ನ ವಿದ್ಯಾರ್ಥಿಗಳು ಮಾಡಬೇಕು ಎಂದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಆಶುಭಾಷಣ ಸ್ಪರ್ಧೆ ಹಾಗೂ ಕವನರಚನಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.

ಪ್ರಕೃತಿ ಮತ್ತು ಬಳಗ ಆಶಯಗೀತೆ ಹಾಡಿದರು. ಸಾಹಿತ್ಯ ಸಂಘದ ಸಂಯೋಜಕರು ಹಾಗೂ ಕನ್ನಡ ಉಪನ್ಯಾಸಕ ಹರೀಶ್ಚಂದ್ರ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕ ವಿನೋದ್ ಕೆಸಿ ವಂದಿಸಿದರು. ಕಾಲೇಜಿನ ಗ್ರಂಥಪಾಲಕಿ ಪ್ರಭಾವತಿ ಸಂಪನ್ಮೂಲ ವ್ಯಕ್ತಿಗಳ ಕಿರುಪರಿಚಯ ಮಾಡಿದರು.ವಿದ್ಯಾಶ್ರೀ  ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here