ಪುತ್ತೂರು: ಚೆಲ್ಯಡ್ಕ ಮುಳುಗು ಸೇತುವೆಗೆ ಮುಕಿ ನೀಡಲು ನಿರ್ದರಿಸಲಾಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ 3 ಕೋ.ರೂಪಾಯಿಗಳ ಪ್ರಸ್ತಾವಣೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ಹೇಳಿದ್ದಾರೆ. ವರ್ಷಕ್ಕೆ 4 ಬಾರಿ ಮುಳುಗುವ ಚೆಲ್ಯಡ್ಕ ಸೇತುವೆಯಿಂದಾಗಿ ಈ ಭಾಗದ ಪ್ರಯಾಣಿಕರಿಗೆ ತೊಂದರೆಯಾಗಿದ್ದು, ಕಳೆದ 10 ವರ್ಷಗಳಿಂದ ನೂತನ ಸೇತುವೆ ನಿರ್ಮಾಣಕ್ಕಾಗಿ ಒತ್ತಾಯಿಸುತ್ತಿದ್ದರು. ಜನರ ಸಮಸ್ಯೆಯನ್ನು ಮನಗಂಡ ಶಾಸಕರು ಲೋಕೋಪಯೋಗಿ ಇಲಾಖೆಯ ಸಚಿವರಲ್ಲಿ ಸಮಸ್ಯೆಯ ಗಂಭೀರತೆಯ ಬಗ್ಗೆ ಚರ್ಚೆ ನಡೆಸಿ ನೂತನ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕರು ಹೇಳಿದ್ದಾರೆ.
ವಿಡಿಯೋಗಾಗಿ ಕ್ಲಿಕ್ ಮಾಡಿ
Home ಇತ್ತೀಚಿನ ಸುದ್ದಿಗಳು ಚೆಲ್ಯಡ್ಕ ಮುಳುಗು ಸೇತುವೆಗೆ ಮುಕ್ತಿ- ನೂತನ ಸೇತುವೆಗೆ ಪ್ರಸ್ತಾವನೆ ಸಲ್ಲಿಕೆ-ಮೂರು ತಿಂಗಳಲ್ಲಿ ಕಾಮಗಾರಿ ಆರಂಭ-ಶಾಸಕ ಅಶೋಕ್...