ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದಿಂದ ವರ್ಷಂಪ್ರತಿಯಂತೆ ಡಿ.24ರಂದು ನಡೆಯಲಿರುವ ವಾರ್ಷಿಕ ಸಮಾವೇಶ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗು ತಾಲೂಕು ಸಮಿತಿಗಳ ಪದಪ್ರದಾನ ಸಮಾರಂಭದ ಆಮಂತ್ರಣ ಪತ್ರವನ್ನು ನ.5ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ನಡೆದ ಸಂಘದ ಚುಂಚಶ್ರೀ ಸಭಾಂಗಣದಲ್ಲಿ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.

ಸಂಘದ ಸಲಹಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಸಂಜೀವ ಮಠಂದೂರು ಆಮಂತ್ರಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಪ್ರಧಾನ ಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಮಹಿಳಾ ಗೌಡ ಸಂಘದ ನಿಯೋಜಿತ ಅಧ್ಯಕ್ಷೆ ವಾರಿಜ ಬೆಳ್ಯಪ್ಪ ಗೌಡ, ಲಿಂಗಪ್ಪ ಗೌಡ ತೆಂಕಿಲ ಸಹಿತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here