ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ಇವುಗಳ ಸಹಯೋಗದೊಂದಿಗೆ ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ-2023 ಇದರ ಭಾಗವಾಗಿ ಮಾಹಿತಿ ಕಾರ್ಯಗಾರವು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾದ ನೆಲ್ಯಾಡಿ ಸೈಂಟ್ ಜಾರ್ಜ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಚೇತನ್ ಆನೆಗುಂಡಿ ಮಾತನಾಡಿ, ದುಶ್ಚಟಗಳ ಸಹವಾಸದಿಂದ ಅನೇಕ ಜನರು ಆರೋಗ್ಯ ನೆಮ್ಮದಿಯನ್ನು ಕಳೆದುಕೊಂಡಿದ್ದಾರೆ. ವಿದ್ಯಾರ್ಥಿಗಳು ಇಂತಹ ಕೆಟ್ಟ ಆಕರ್ಷಣೆಗಳಿಂದ ದೂರವಿದ್ದು, ಸ್ವಸ್ಥ ಸಮಾಜವನ್ನು ಕಟ್ಟುವಲ್ಲಿ ಶ್ರಮಿಸಬೇಕು ಎಂದು ಹೇಳಿದರು. ಶ್ರೀ ರಾಮ ವಿದ್ಯಾಲಯದ ಮುಖ್ಯೋಪಾಧ್ಯಾಯರಾದ ಗಣೇಶ್ ವಾಗ್ಲೆ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ವಲಯ ಮೇಲ್ವಿಚಾರಕ ವಿಜೇಶ್ ಜೈನ್, ಜನಜಾಗೃತಿ ವೇದಿಕೆ ಸದಸ್ಯ ತುಕಾರಾಮ ರೈ, ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ಭಾಸ್ಕರ ಶೆಟ್ಟಿ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಸ್ವಾಗತಿಸಿದರು. ಶ್ರೀರಾಮ ವಿದ್ಯಾಲಯದ ಶಿಕ್ಷಕಿ ಭಾಗೀರಥಿ ನಿರೂಪಿಸಿ, ಶಿಕ್ಷಕಿ ಅಶ್ವಿನಿ ವಂದಿಸಿದರು. ಸೇವಾಪ್ರತಿನಿಧಿಗಳಾದ ನಮಿತಾ ಎಸ್ ಶೆಟ್ಟಿ, ಸುಮನ ಎಸ್ ಸಹಕರಿಸಿದರು.

LEAVE A REPLY

Please enter your comment!
Please enter your name here