





ಪುತ್ತೂರು: ಕಲ್ಲೆಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಎಂಬವರ ಬರ್ಬರ ಹತ್ಯೆಗೆ ಸಂಬಂಧಿಸಿ ಇಬ್ಬರು ಆರೋಪಿಗಳು ಈಗಾಗಲೇ ಠಾಣೆಗೆ ಶರಣಾಗಿದ್ದು, ಇನ್ನುಳಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.


ನ.6ರ ತಡರಾತ್ರಿ ಅಕ್ಷಯ್ ಕಲ್ಲೇಗ ಅವರನ್ನು ನೆಹರುನಗರ ಜಂಕ್ಷನ್ನಲ್ಲಿ ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿತ್ತು. ಈ ವೇಳೆಗಾಗಲೇ ಇಬ್ಬರು ಆರೋಪಿಗಳಾದ ದಾರಂದಕುಕ್ಕು ನಿವಾಸಿ ಮನೀಶ್ ಮತ್ತು ಖಾಸಗಿ ಬಸ್ ಚಾಲಕ ಬನ್ನೂರು ಕೃಷ್ಣನಗರ ನಿವಾಸಿ ಚೇತನ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಅವರನ್ನು ವಿಚಾರಣೆಗೆಗೊಳಪಡಿಸಿದ ಪೊಲೀಸರು ಕೃತ್ಯದಲ್ಲಿ ಇನ್ನಿಬ್ಬರು ಭಾಗಿಯಾಗಿರುವ ಮಾಹಿತಿ ಪಡೆದುಕೊಂಡು ಇನ್ನಿಬ್ಬರು ಆರೋಪಿಗಳಾದ ಮಂಜುನಾಥ್ ಯಾನೆ ಹರಿ ಮತ್ತು ಕೇಶವ ಪಡೀಲ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಕೊಲೆ ನಡೆದ ಸ್ಥಳಕ್ಕೆ ಡಿವೈಎಸ್ಪಿ ಸಹಿತ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ,ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಮಹಜರು ನಡೆಸಿ, ಮೃತ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.














