ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ.ಸಿ.ಟ್ರಸ್ಟ್ ಕಡಬ ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಇವುಗಳ ಆಶ್ರಯದಲ್ಲಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಕಡಬ ಇದರ ಸಹಕಾರದೊಂದಿಗೆ ಜನಜಾಗೃತಿ ವೇದಿಕೆಯ ಸ್ವಾಸ್ಥ್ಯ ಸಂಕಲ್ಪ ಸಪ್ತಾಹದ ಸಮಾರೋಪ ,ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ನ.8ರಂದು ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ಸಂಚಾಲಕ ರೆ.ಫಾ.ಜೈಸನ್ ಓಐಸಿ ದೀಪ ಪ್ರಜ್ವಲನೆ ಮಾಡುವರು.ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾದರ್ ಥೋಮಸ್ ಬಿಜಿಲಿ ಓ.ಐ.ಸಿ. ಬಹುಮಾನ ವಿತರಿಸುವರು.ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಸಮಾರೋಪ ಭಾಷಣ ಮಾಡುವರು.ಅಧ್ಯಕ್ಷತೆಯನ್ನು ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ, ವಕೀಲ ಮಹೇಶ್ ಕೆ.ಸವಣೂರು ವಹಿಸುವರು.
ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದ.ಕ.ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ನಿರ್ದೇಶಕ ಪ್ರವೀಣ್ ಕುಮಾರ್ , ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ಉಪಪ್ರಾಂಶುಪಾಲ ಜೋಸ್ ಎಂ.ಜೆ , ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಕಡಬ ತಾಲೂಕಿನ ಅಧ್ಯಕ್ಷ ಸಂತೋಷ್ ಕೆ. ,ಜನಜಾಗೃತಿ ವೇದಿಕೆಯ ನೆಲ್ಯಾಡಿ ವಲಯದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಪಾಲ್ಗೊಳ್ಳುವರು ಎಂದು ಗ್ರಾಮಾಭಿವೃದ್ದಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಎನ್. ನಾವೂರು ,ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.