ಸಂಪ್ಯ ಆನಂದಾಶ್ರಮ ಸೇವಾ ಟ್ರಸ್ಟ್ ನ ಬೆಳ್ಳಿಹಬ್ಬ-ಆರೋಗ್ಯ ಸವಲತ್ತುಗಳಿಗಾಗಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ

0

ಪುತ್ತೂರು :ಸಂಪ್ಯದಲ್ಲಿರುವ ಆನಂದಾಶ್ರಮ ಸೇವಾ ಟ್ರಸ್ಟ್ ನಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಬೆಳ್ಳಿ ಹಬ್ಬದ ಅಂಗವಾಗಿ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಳ್ಳಿ ಹಬ್ಬದ ಅಂಗವಾಗಿ ಅರ್ಹ ಫಲಾನುಭವಿಗಳಿಗೆ ಸರ್ಜಿಕಲ್ ಮಂಚ, ವ್ಹೀಲ್ ಚೆಯರ್, ಹೊಲಿಗೆ ಯಂತ್ರ ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ಇನ್ನಿತರ ಸವಲತ್ತುಗಳನ್ನು ವಿತರಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ನ.30ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆ ಟ್ರಸ್ಟೀ ಪಿ. ಸದಾಶಿವ ಪೈ ಮೊಬೈಲ್ 9980076707 ನಂಬರನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here