ತಾ.ಮಟ್ಟದ ಕ್ರೀಡಾಕೂಟ-ಆಲಂಕಾರು ಶ್ರೀ ದುರ್ಗಾಂಬಾ ಪ.ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

0

ಆಲಂಕಾರು: ಕಡಬ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಸರಕಾರಿ ಪದವಿ ಪೂರ್ವ ಕಾಲೇಜ್ ಕಡಬದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರಿನ ಬಾಲಕಿಯರ ತಂಡ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿದೆ. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ರೂಪಿಕಾ ತ್ರಿವಿಧ ಜಿಗಿತದಲ್ಲಿ ಪ್ರಥಮ, ಡಿಸ್ಕಸ್ ತ್ರೋದಲ್ಲಿ ದ್ವಿತೀಯ, 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಗುಂಡು ಎಸೆತದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗ ಕೃತಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಈಟಿ ಎಸೆತದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗ ಶ್ರಾವ್ಯ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಉದ್ದ ಜಿಗಿತದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಹರ್ಷ ತೃತೀಯ ಸ್ಥಾನ ಪಡೆದಿರುತ್ತಾರೆ. ದ್ವಿತೀಯ ಪಿಯುಸಿ ಕಲಾ ವಿಭಾಗ ಗುಂಡು ಎಸೆತದಲ್ಲಿ ಅಫ್ವಲ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. 4×100 ಮೀಟರ್ ರಿಲೆಯಲ್ಲಿ ಹರ್ಷ, ರೂಪಿಕಾ, ಮೈತ್ರಿ, ತೃಪ್ತಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. 4×400 ಮೀಟರ್ ರಿಲೆಯಲ್ಲಿ ಹರ್ಷ, ರೂಪಿಕಾ, ಮೈತ್ರಿ,ತೃಪ್ತಿ,ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಮತ್ತು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೇಯಸ್ಸು ರೈ ಹಾಗು ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆಯವರು ದುರ್ಗಾಂಬಾ ಪದವಿ ಪೂರ್ವ ಕಾಲೇಜ್ ನಲ್ಲಿ ಗೌರವಿಸಿದರು. ಈ ಸಂದರ್ಭದಲ್ಲಿ ಮುಖ್ಯ ಗುರುಗಳು, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here