ಪುತ್ತೂರು: ಪುತ್ತೂರು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯು ನ.7ರಂದು ಕೊಂಬೆಟ್ಟು ಕೊಂಬೆಟ್ಟು ಸ.ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ನಡೆಯಿತು.
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಕೊಂಬೆಟ್ಟು ಸ.ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗದ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವನ್ನು ನಗರಸಭೆ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರು ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜೋಕಿಂ ಡಿ’ಸೋಜ ಅವರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಎನ್, ಶಿಕ್ಷಣ ಸಂಯೋಜಕ ಹರಿಪ್ರಸಾದ್, ಅಮೃತಾಕಲಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರತ್ನಕುಮಾರಿ, ಜಿಲ್ಲಾ ಸಹಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಶ್ಯಾಮಲ, ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ, ಎಸ್.ಎ, ಮುಖ್ಯಗುರುಗಳ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲ ಗೋಪಾಲ ಗೌಡ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸೇರ ಕೋಟಿಯಪ್ಪ ಪೂಜಾರಿ, ನಿವೃತ್ತ ಶಿಕ್ಷಕರಾದ ನಾರಾಯಣ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ ಸದಸ್ಯರಾದ ಸುರೇಶ್ ರೈ ಪಡ್ಡಂಬೈಲು, ಚೆನ್ನಪ್ಪ, ಜಯಪ್ರಕಾಶ್, ಅನಿತಾ, ರೇಷ್ಮಾ ಪಿಂಟೊ, ವಿನಿತಾ, ಪ್ರೀತಾ ಎನ್.ರೈ ಮಹೇಶ್ ಭಟ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪಪ್ರಾಂಶುಪಾಲ ವಸಂತ ಮೂಲ್ಯ ಕೆ ಸ್ವಾಗತಿಸಿ, ಹಿರಿಯ ಶಿಕ್ಷಕಿ ಮಮತಾ ರೈ ವಂದಿಸಿದರು. ಶಿಕ್ಷಕರಾದ ಮಧುರಾ ಕೆ ಹಾಗೂ ಜಾನ್‌ವಾಲ್ಡರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು.