ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಹಾರಾಡಿ, ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢವಿಭಾಗ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆದ 2023- 24 ನೇ ಸಾಲಿನ ಪುತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದಿರುತ್ತಾರೆ. 8ನೇ ತರಗತಿ ವಿದ್ಯಾರ್ಥಿ ವಸು ಶರ್ಮ ಸಂಸ್ಕೃತ ಭಾಷಣದಲ್ಲಿ ದ್ವಿತೀಯ ಸ್ಥಾನ, ಜಾನಪದ ಗೀತೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಹರ್ಷ ದ್ವಿತೀಯ ಸ್ಥಾನ, ಇಂಗ್ಲೀಷ್ ಭಾಷಣದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶರಣ್ಯ ಎಸ್ ದ್ವಿತೀಯ, ಸ್ಥಾನ ಕನ್ನಡ ಭಾಷಣದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಶಾವ್ಯ ಯು.ರೈ ತೃತೀಯ ಸ್ಥಾನ, ಸಂಸ್ಕೃತ ಧಾರ್ಮಿಕ ಪಠಣದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಪೂರ್ವಿ ತೃತೀಯ ಸ್ಥಾನ, ಆಶುಭಾಷಣದಲ್ಲಿ 10ನೇ ತರಗತಿ ವಿದ್ಯಾರ್ಥಿ ಹೇಮಂತ್ ಕುಮಾರ್ ದ್ವಿತೀಯ ಸ್ಥಾನ, ಹಾಗೂ ಜಾನಪದ ನೃತ್ಯ ತಂಡವು ತೃತೀಯ ಸ್ಥಾನ ಪಡೆದುಕೊಂಡಿತು. ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಗುರು ರಾಜೇಶ್ ಎನ್, ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.