ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಪುತ್ತೂರು ಇವರ ಸಹಭಾಗಿತ್ವದಲ್ಲಿ ಅಂಬಿಕಾ ಮಹಾ ವಿದ್ಯಾಲಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಯಾದ ಅಕ್ಷಯ್ ಎ ಪಿ 9ನೇ ತರಗತಿ ಇಂಜಿನಿಯರಿಂಗ್ ವಿಭಾಗದಲ್ಲಿ ಎನೋವೆಲ್ ಫಿಶ್ ಫೀಡರ್ ಎಂಬ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಶಾಂತಿ ಬಿ.ಎಸ್ ತಿಳಿಸಿದ್ದಾರೆ.