ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್‌ನಲ್ಲಿ 5 ವರ್ಷಗಳ ಕಾಲ ಅಭಿವೃದ್ಧಿ ಅಧಿಕಾರಿಯಾಗಿದ್ದ ಪದ್ಮ ಕುಮಾರಿಯವರು ಕಾರ್ಕಳ ತಾಲೂಕಿಗೆ ವರ್ಗಾವಣೆಗೊಂಡಿದ್ದು ಆ ಬಳಿಕ ಪಂಚಾಯತ್‌ನ ಕಾರ್ಯದರ್ಶಿಯಾಗಿದ್ದ ಶಿವರಾಮ ಮೂಲ್ಯರವರು 1 ತಿಂಗಳ ಕಾಲ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿದ್ದರು. ಇದೀಗ ಕೊಳ್ತಿಗೆ ಗ್ರಾಪಂನ ಅಭಿವೃದ್ಧಿ ಅಧಿಕಾರಿ ಸುನೀಲ್ ಎಚ್.ಟಿಯವರು ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.