ನ.11: ಪುಣ್ಚತ್ತಾರಿನಲ್ಲಿ ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‌ನಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪ್ರೋ ವಾಲಿಬಾಲ್ ಪಂದ್ಯಾಟ, ಆಟೋಟ ಸ್ಪರ್ಧೆ, ಸನ್ಮಾನ, ಪ್ರತಿಭಾ ಪುರಸ್ಕಾರ

0

ಪುತ್ತೂರು: ಪುಣ್ಚಾತ್ತಾರುವಿನ ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಆಯ್ದ ಸ್ಥಳೀಯ ಆಟಗಾರರ ನಿಗದಿತ 12 ತಂಡಗಳ ಪ್ರೋ ವಾಲಿಬಾಲ್ ಪಂದ್ಯಾಟ ಮತ್ತು ಸ್ಥಳೀಯರಿಗೆ ಆಟೋಟ ಸ್ಪರ್ಧೆ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ, ಅಶಕ್ತ ಎರಡು ಬಡಕುಟುಂಬಗಳಿಗೆ ಸಹಾಯಧನ ವಿತರಣೆಯು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನ.11ರಂದು ಪುಣ್ಚತ್ತಾರುವಿನಲ್ಲಿ ನಡೆಯಲಿದೆ ಎಂದು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‌ನ ಸಕ್ರೀಯ ಸದಸ್ಯ ರವೀಂದ್ರ ಅನಿಲ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಕ್ಲಬ್ ವತಿಯಂದ ಹಲವು ವರ್ಷಗಳಿಂದ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಮಾಡಿಕೊಂಡು ಬಂದಿದ್ದು, ಈ ವರ್ಷ ದೀಪಾವಳಿ ಹಬ್ಬದ ಅಂಗವಾಗಿ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನಕ್ಕೆ ರೂ.25ಸಾವಿರ ಮೊತ್ತದ ಆಲ್‌ಮೋಡರ್ನ್ ಕಂಪೆನಿಯ ಫ್ಯಾನ್ ಅಳವಡಿಸಲಾಗಿದೆ. ಶ್ರೀಹರಿ ಸಭಾಭವನಕ್ಕೆ ರೂ.30ಸಾವಿರ ವೆಚ್ಚದಲ್ಲಿ ಕುಡಿಯುವ ನೀರಿನ ಘಟಕ, ಸ್ಥಳೀಯ ಅಂಗನವಾಡಿಗೆ ರೂ.15ಸಾವಿರ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಒದಗಿಸಿ ಬೆಳಕು ಮತ್ತು ಫ್ಯಾನ್ ವ್ಯವಸ್ಥೆ ಮಾಡಲಾಗಿದೆ. ಈ ಮೂರು ಕೊಡುಗೆಗಳನ್ನು ದೀಪಾವಳಿಹಬ್ಬದ ಸಮಾರೋಪ ಸಮಾರಂಭದಲ್ಲಿ ಹಸ್ತಾಂತರ ಮಾಡಲಾಗುವುದು ಎಂದ ಅವರು ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ನಗದು ಬಹುಮಾನ ನೀಡಲಾಗುವುದು. ಬೆಳಿಗ್ಗೆ ನಿವೃತ್ತ ಯುವಜನ ಸೇವಾ ಕ್ರೀಡಾಧಿಕಾರಿ ಬಿ.ಕೆ.ಮಾಧವ ಅವರು ಉದ್ಘಾಟಿಸಲಿದ್ದಾರೆ. ಶ್ರೀ ಹರಿ ಭಜನಾ ಮಂಡಳಿ ಗೌರವಾಧ್ಯಕ್ಷ ಐ ನಾರಾಯಣ ಗೌಡ ಇಡ್ಯಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಅನೇಕರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉದ್ಘಾಟನೆ ಕಾರ್ಯಕ್ರಮದ ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸಂಜೆ ಗಂಟೆ 7ಕ್ಕೆ ಸಮಾರೋಪ ಸಮಾರಂಭದಲ್ಲಿ ಶ್ರೀಹರಿ ಸ್ಪೋರ್ಟ್ಸ್‌ಕ್ಲಬ್‌ನ ಗೌರವಾಧ್ಯಕ್ಷ ಬೆಂಗಳೂರಿನಲ್ಲಿ ವಕೀಲಿ ವೃತ್ತಿಯಲ್ಲಿರುವ ಮೋಹನ್ ಗೌಡ ಇಡ್ಯಡ್ಕ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಎಡಿಷನಲ್ ಎಸ್.ಪಿ ಧರ್ಮಪ್ಪ ಎನ್.ಎಮ್ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಲವಾರು ಮಂದಿ ಗಣ್ಯರು ಈ ಸಂದರ್ಭ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮತ್ತು ಅಶಕ್ತ ಎರಡು ಬಡ ಕುಟುಂಬಗಳಿಗೆ ಸಹಾಯಧನ ವಿತರಣೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್‌ಕ್ಲಬ್‌ನ ಸ್ಥಾಪಕ ಅಧ್ಯಕ್ಷ ರಾಧಾಕೃಷ್ಣ ಪೈಕ, ಅಧ್ಯಕ್ಷ ಹರೀಶ್ ಪೈಕ(ಕಟೀಲ್) ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here