ಮಾಣಿ ಬಾಲವಿಕಾಸ‌ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ದೇವಿಕಾ ಕೆ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ

0

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಇದರ ಆಶ್ರಯದಲ್ಲಿ ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆ ಸಿದ್ಧಕಟ್ಟೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ದೇವಿಕಾ ಕೆ, ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ಸ್ವಸ್ತಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅರೇಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಅಜ್ಮಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಿಂದಿ ಭಾಷಣ ಸ್ಪರ್ಧೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ವೃದ್ಧಿ ಎ.ಕೊಂಡೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

LEAVE A REPLY

Please enter your comment!
Please enter your name here