ವಿಟ್ಲ: ಶ್ರೀ ಸತ್ಯಸಾಯಿ ಲೋಕ ಸೇವಾ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ ಎಂ ಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ವಿಜ್ಞಾನದ ಮಾದರಿಗಳು ಅಗತ್ಯ ಎಂಬುದಾಗಿ ಹೇಳಿದರು. 25 ಶಾಲೆಗಳಿಂದ ಸುಮಾರು 65 ಮಕ್ಕಳು ಭಾಗವಹಿಸಿದ್ದರು. ವೈಯಕ್ತಿಕ ಮತ್ತು ಗುಂಪು ವಿಭಾಗದಿಂದ ಸಂಶೋದಿತ 42 ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಗಳ ಸಂಚಾಲಕರು ಮತ್ತು ಶ್ರೀ ಸತ್ಯ ಸಾಯಿ ಲೋಕಸೇವಾ ಟ್ರಸ್ಟ್ ನ ಕಾರ್ಯದರ್ಶಿಗಳಾದ ಎಸ್. ಚಂದ್ರಶೇಖರ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಕ್ಷೇತ್ರ ಸಮನ್ವಯಾಧಿಕಾರಿಗಳಾದ ರಾಘವೇಂದ್ರ ಬಲ್ಲಾಳ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ರಘು ಸ್ವಾಗತಿಸಿದರು. ನಾರಾಯಣ ನಾಯಕ್ ವಂದಿಸಿದರು. ಅಶೋಕ ಕುಮಾರ ಕಾರ್ಯಕ್ರಮ ನಿರೂಪಿಸಿದರು.