ಉಪ್ಪಿನಂಗಡಿ: ಸಮಾಜ ಸೇವೆಯ ಗುಣ ನಮ್ಮಲ್ಲಿ ಅಡಕವಾಗಿದ್ದರೆ ನಮ್ಮ ಜೀವನ ಸಾರ್ಥ್ಯಕ್ಯವಾಗಲು ಸಾಧ್ಯ ಎಂದು ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಜೈರಾಜ್ ಭಂಡಾರಿ ತಿಳಿಸಿದರು. ಪುತ್ತೂರು ರೋಟರಿ ಕ್ಲಬ್ ಮತ್ತು ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜು ಪುತ್ತೂರು ಇವುಗಳ ಸಹಯೋಗದೊಂದಿಗೆ ಕಾಲೇಜಿನ ರಾಷ್ಷ್ರೀಯ ಸೇವಾ ಯೋಜನಾ ಘಟಕಗಳು, ಯುವ ರೆಡ್ ಕ್ರಾಸ್ ಘಟಕ, ದೈಹಿಕ ಶಿಕ್ಷಣ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶಗಳು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅರ್ಹ ವ್ಯಕ್ತಿಗಳು ರಕ್ತದಾನ ಮಾಡುವ ಮೂಲಕ ವೈದ್ಯಕೀಯ ಕ್ಷೇತ್ರದ ಅವಶ್ಯಕತೆಗಳನ್ನು ಈಡೇರಿಸಬೇಕು ಎಂದು ಅವರು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲೆ ಪ್ರೀತಾ ಹೆಗ್ಡೆ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕ ದಶರಥ ಕೆ.ಟಿ., ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ್ ಕುಮಾರ್ ಕೆ., ಎನ್ನೆಸ್ಸೆಸ್ ಯೋಜನಾಧಿಕಾರಿ ಕೇಶವ ಕುಮಾರ್ ಬಿ., ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಶಿಬಿರದಲ್ಲಿ 60ಕ್ಕೂ ಅಧಿಕ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಹರಿಪ್ರಸಾದ್ ಎಸ್. ಸ್ವಾಗತಿಸಿದರು. ಯುವ ರೆಡ್ ಕ್ರಾಸ್ ಘಟಕದ ರವಿರಾಜ ಎಸ್. ವಂದಿಸಿದರು. ವಿದ್ಯಾರ್ಥಿನಿ ಸುಕನ್ಯಾ ಎಸ್. ಕಾರ್ಯಕ್ರಮ ನಿರ್ವಹಿಸಿದರು.