ನ.12- ದೇವರಗುಡ್ಡೆ ವೀರಾಂಜನೇಯ ಗೆಳೆಯರ ಬಳಗ ಸೇವಾ ಟ್ರಸ್ಟ್‌ನಿಂದ ಕ್ರೀಡಾಕೂಟ

0

ಕಾಣಿಯೂರು: ಬೆಳಂದೂರು ದೇವರಗುಡ್ಡೆ ವೀರಾಂಜನೇಯ ಗೆಳೆಯರ ಬಳಗ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ 5ನೇ ವರ್ಷದ ಕ್ರೀಡಾಕೂಟವು ದೇವರಗುಡ್ಡೆ ಕ್ರೀಡಾಂಗಣದಲ್ಲಿ ನ.12ರಂದು ನಡೆಯಲಿದೆ. ಬೆಳಿಗ್ಗೆ ನಡೆಯವ ಕ್ರೀಡಾಕೂಟದ ಸಭಾ ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ವಿವೇಕ್ ಆಳ್ವ ನಡುಮನೆ ಉದ್ಘಾಟಿಸಲಿದ್ದು, ಬೆಳಂದೂರು ದೇವರಗುಡ್ಡೆ ವೀರಾಂಜನೇಯ ಗೆಳೆಯರ ಬಳಗ ಸೇವಾ ಟ್ರಸ್ಟ್‌ನ ಅಧ್ಯಕ್ಷ ರಾಜೇಶ್ ಗೌಡ ಬನಾರಿ ಅಧ್ಯಕ್ಷತೆ ವಹಿಸಲಿದ್ದು, ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಟ್ರಸ್ಟ್‌ನ ಗೌರವಾಧ್ಯಕ್ಷ ಶ್ರೀಧರ ಗೌಡ ಕೊಯಕ್ಕುಡೆ ಅಧ್ಯಕ್ಷತೆ ವಹಿಸಲಿದ್ದು, ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರು, ನಿವೃತ್ತ ಪ್ರಾಂಶುಪಾಲರಾದ ಕೃಷ್ಣ ಭಟ್ ಬರೆಪ್ಪಾಡಿ ಬಹುಮಾನ ವಿತರಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಮಂದಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು, ಹಿಂದೂ ಬಾಂಧವರಿಗೆ ಮಾತ್ರ ಕ್ರೀಡಾಕೂಟದಲ್ಲಿ ಭಾಗವಹಿಸಬಹುದು ಎಂದು ಟ್ರಸ್ಟ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here