ಪಡ್ಡಾಯೂರು ಕೊರಗಪ್ಪ ಗೌಡರ ಧರ್ಮಪತ್ನಿ ಸೀತಮ್ಮ ವಿಧಿವಶ

0

ಪುತ್ತೂರು: ಪಡ್ಡಾಯೂರು ಭಜನಾ ಮಂದಿರದ ಬಳಿಯ ನಿವಾಸಿ ಕೊರಗಪ್ಪ ಗೌಡ ಎಂಬವರ ಧರ್ಮಪತ್ನಿ ಸೀತಮ್ಮ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಿದ್ದ ಸೀತಮ್ಮ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ನಿಧನರಾಗಿದ್ದಾರೆ. ಮೃತರು ಪತಿ, ಪುತ್ರ ಪಡ್ಡಾಯೂರು ಸ್ಪೋರ್ಟ್ಸ್‌ ಕ್ಲಬ್‌ ನ ಸ್ಥಾಪಕ ಅಧ್ಯಕ್ಷ ಲೋಕೇಶ್‌ ಮತ್ತು ಪುತ್ರಿ, ಮೊಮ್ಮಕ್ಕಳು ಸೇರಿದಂತೆ ಬಂಧುಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here