ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸೇವಾ ಸೌರಭ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

0

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸೇವಾ ಸೌರಭ ಕಾರ್ಯಕ್ರಮಕ್ಕೆ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ವಿದ್ಯುಕ್ತ ಚಾಲನೆ ದೊರೆಯಿತು. ದೀಪಾವಳಿಯ ಪೂಜಾ ವಿಧಿವಿಧಾನ ನೆರವೇರಿತು.ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಶೋಕ್ ಕುಮಾರ್ ರೈರವರ ತಾಯಿ ಗಿರಿಜಾ ಎಸ್. ರೈ ದೀಪ ಬೆಳಗಿಸಿ ಚಾಲನೆ ನೀಡಿದರು.

ಈ ವೇಳೆ ಅಶೋಕ್ ಕುಮಾರ್ ರೈ, ಸುಮಾ ಅಶೋಕ್ ರೈ, ಮಕ್ಕಳು ಹಾಗೂ ಅವರ ಕುಟುಂಬಿಕರು, ಹಾಗೂ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಆರ್ ಶೆಟ್ಟಿ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here